Home Bibles ಮಾರ್ಕ 5:43 · ಕನ್ನಡ ಬೈಬಲ್
ಮಾರ್ಕ 5:43 · ಕನ್ನಡ ಬೈಬಲ್

ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.

Cross references

ಮತ್ತಾಯ 8:4

ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.

ಮತ್ತಾಯ 9:30

ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.

ಮತ್ತಾಯ 12:16

ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

ಮತ್ತಾಯ 17:9

ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.

ಮಾರ್ಕ 1:43

ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;

ಮಾರ್ಕ 3:12

ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.

ಮಾರ್ಕ 7:36

ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

ಲೂಕ 5:14

ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.

ಲೂಕ 8:56

ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

ಲೂಕ 24:30

ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.

ಲೂಕ 24:42

ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.

ಯೋಹಾನ 5:41

ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.

ಅಪೋಸ್ತಲರ ಕೃತ್ಯಗಳು 10:41

ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.

Interlinear

Choose Theme