ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
Cross references
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.