Home Bibles ಮಾರ್ಕ 8:23 · ಕನ್ನಡ ಬೈಬಲ್
ಮಾರ್ಕ 8:23 · ಕನ್ನಡ ಬೈಬಲ್

ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.

Cross references

ಯೆಶಾಯ 44:2

ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.

ಯೆಶಾಯ 51:18

ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.

ಯೆರೆಮಿಯ 31:32

ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

ಮಾರ್ಕ 5:23

ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಮಾರ್ಕ 7:33

ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;

ಯೋಹಾನ 9:6

ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;

ಅಪೋಸ್ತಲರ ಕೃತ್ಯಗಳು 9:8

ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;

ಅಪೋಸ್ತಲರ ಕೃತ್ಯಗಳು 23:19

ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.

ಹೆಬ್ರಿಯರಿಗೆ 8:9

ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.

ಪ್ರಕಟನೆ 3:18

ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ

Interlinear

Choose Theme