Home Bibles ಮಾರ್ಕ 8:26 · ಕನ್ನಡ ಬೈಬಲ್
ಮಾರ್ಕ 8:26 · ಕನ್ನಡ ಬೈಬಲ್

ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.

Cross references

ಮತ್ತಾಯ 8:4

ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.

ಮತ್ತಾಯ 9:30

ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.

ಮತ್ತಾಯ 12:16

ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

ಮಾರ್ಕ 5:43

ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.

ಮಾರ್ಕ 7:36

ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

ಮಾರ್ಕ 8:23

ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.

Interlinear

Choose Theme