Home Bibles ಮಾರ್ಕ 9:18 · ಕನ್ನಡ ಬೈಬಲ್
ಮಾರ್ಕ 9:18 · ಕನ್ನಡ ಬೈಬಲ್

ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.

Cross references

2 ಅರಸುಗಳು 4:29

ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.

ಯೋಬ 16:9

ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.

ಕೀರ್ತನೆಗಳು 112:10

ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.

ಮತ್ತಾಯ 8:12

ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಮತ್ತಾಯ 15:22

ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.

ಮತ್ತಾಯ 17:16

ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.

ಮತ್ತಾಯ 17:19

ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.

ಮಾರ್ಕ 9:20

ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.

ಮಾರ್ಕ 9:26

ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.

ಮಾರ್ಕ 9:28

ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.

ಮಾರ್ಕ 11:23

ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.

ಲೂಕ 9:39

ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.

ಅಪೋಸ್ತಲರ ಕೃತ್ಯಗಳು 7:54

ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

ಯೂದ 1:13

ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

Interlinear

Choose Theme