Home Bibles ಮಾರ್ಕ 9:21 · ಕನ್ನಡ ಬೈಬಲ್
ಮಾರ್ಕ 9:21 · ಕನ್ನಡ ಬೈಬಲ್

ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;

Cross references

ಯೋಬ 5:7

ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.

ಯೋಬ 14:1

ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.

ಕೀರ್ತನೆಗಳು 51:5

ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.

ಮಾರ್ಕ 5:25

ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು

ಲೂಕ 8:43

ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು

ಲೂಕ 13:16

ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.

ಯೋಹಾನ 5:5

ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.

ಯೋಹಾನ 9:1

ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಯೋಹಾನ 9:20

ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.

ಅಪೋಸ್ತಲರ ಕೃತ್ಯಗಳು 3:2

ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.

ಅಪೋಸ್ತಲರ ಕೃತ್ಯಗಳು 4:22

ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.

ಅಪೋಸ್ತಲರ ಕೃತ್ಯಗಳು 9:33

ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.

ಅಪೋಸ್ತಲರ ಕೃತ್ಯಗಳು 14:8

ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.

Interlinear

Choose Theme