ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
Cross references
ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.
ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.
ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;