ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
Cross references
ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್‌ಗೆ ಬಂದಾಗ ಲೋಟನು ಸೊದೋ ಮ್‌ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.