Home Bibles ಮತ್ತಾಯ 10:15 · ಕನ್ನಡ ಬೈಬಲ್
ಮತ್ತಾಯ 10:15 · ಕನ್ನಡ ಬೈಬಲ್

ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.

Cross references

ಯೆಹೆಜ್ಕೇಲ 16:48

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.

ಮತ್ತಾಯ 5:18

ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 11:22

ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.

ಮತ್ತಾಯ 12:36

ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

ಮತ್ತಾಯ 24:34

ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮಾರ್ಕ 6:11

ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ

ಲೂಕ 10:11

ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.

ಯೋಹಾನ 15:22

ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.

2 ಪೇತ್ರ 2:6

ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

2 ಪೇತ್ರ 2:9

ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

2 ಪೇತ್ರ 3:7

ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

1 ಯೋಹಾನ 4:17

ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.

Interlinear

Choose Theme