Home Bibles ಮತ್ತಾಯ 10:27 · ಕನ್ನಡ ಬೈಬಲ್
ಮತ್ತಾಯ 10:27 · ಕನ್ನಡ ಬೈಬಲ್

ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.

Cross references

ಸಾಮೇತಿಗಳು 1:20

ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.

ಸಾಮೇತಿಗಳು 8:1

ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?

ಮತ್ತಾಯ 13:1

ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.

ಮತ್ತಾಯ 13:34

ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.

ಲೂಕ 8:10

ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.

ಯೋಹಾನ 16:1

ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.

ಯೋಹಾನ 16:13

ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.

ಯೋಹಾನ 16:25

ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

ಯೋಹಾನ 16:29

ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.

ಅಪೋಸ್ತಲರ ಕೃತ್ಯಗಳು 5:20

ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 5:28

ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.

ಅಪೋಸ್ತಲರ ಕೃತ್ಯಗಳು 17:17

ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.

2 ಕೊರಿಂಥದವರಿಗೆ 3:12

ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.

Interlinear

Choose Theme