Home Bibles ಮತ್ತಾಯ 10:32 · ಕನ್ನಡ ಬೈಬಲ್
ಮತ್ತಾಯ 10:32 · ಕನ್ನಡ ಬೈಬಲ್

ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;

Cross references

1 ಸಮುವೇಲ 2:30

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

ಕೀರ್ತನೆಗಳು 119:46

ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.

ಮತ್ತಾಯ 25:34

ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

ಲೂಕ 12:8

ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.

ಯೋಹಾನ 9:22

ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.

ರೋಮಾಪುರದವರಿಗೆ 10:9

ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

1 ತಿಮೋಥೆಯ 6:12

ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.

2 ತಿಮೋಥೆಯ 1:8

ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.

1 ಯೋಹಾನ 4:15

ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

ಪ್ರಕಟನೆ 2:13

ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ

ಪ್ರಕಟನೆ 3:5

ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.

Interlinear

Choose Theme