ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.