ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Cross references
ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.