ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
Cross references
ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.