Home Bibles ಮತ್ತಾಯ 12:45 · ಕನ್ನಡ ಬೈಬಲ್
ಮತ್ತಾಯ 12:45 · ಕನ್ನಡ ಬೈಬಲ್

ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

Cross references

ಲೇವ್ಯಕಾಂಡ 13:20

ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.

ಮತ್ತಾಯ 12:24

ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

ಮತ್ತಾಯ 17:21

ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.

ಮತ್ತಾಯ 21:38

ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

ಮತ್ತಾಯ 23:15

ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.

ಮತ್ತಾಯ 23:24

ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.

ಮತ್ತಾಯ 23:32

ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.

ಮಾರ್ಕ 5:9

ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್‌ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.

ಮಾರ್ಕ 16:9

ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.

ಲೂಕ 11:26

ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.

ಲೂಕ 11:49

ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.

ಲೂಕ 19:41

ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--

ಯೋಹಾನ 15:22

ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.

ರೋಮಾಪುರದವರಿಗೆ 11:8

(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

ಎಫೆಸದವರಿಗೆ 6:12

ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.

1 ತೆಸಲೋನಿಕದವರಿಗೆ 2:15

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

ಹೆಬ್ರಿಯರಿಗೆ 6:4

ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

ಹೆಬ್ರಿಯರಿಗೆ 10:26

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಹೆಬ್ರಿಯರಿಗೆ 10:39

ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.

2 ಪೇತ್ರ 2:14

ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

1 ಯೋಹಾನ 5:16

ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ

ಯೂದ 1:10

ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

Interlinear

Choose Theme