ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
Cross references
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.