ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--