ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
Cross references
ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.
ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.