Home Bibles ಮತ್ತಾಯ 13:32 · ಕನ್ನಡ ಬೈಬಲ್
ಮತ್ತಾಯ 13:32 · ಕನ್ನಡ ಬೈಬಲ್

ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.

Cross references

ಕೀರ್ತನೆಗಳು 72:16

ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.

ಕೀರ್ತನೆಗಳು 104:12

ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.

ಯೆಶಾಯ 2:2

ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಯೆಹೆಜ್ಕೇಲ 17:23

ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಯೆಹೆಜ್ಕೇಲ 31:6

ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.

ಯೆಹೆಜ್ಕೇಲ 47:1

ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.

ದಾನಿಯೇಲ 2:34

ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 4:12

ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.

ಮೀಕ 4:1

ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.

ಜೆಕರ್ಯ 4:10

ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.

ಜೆಕರ್ಯ 8:20

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಜೆಕರ್ಯ 14:7

ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.

ಅಪೋಸ್ತಲರ ಕೃತ್ಯಗಳು 1:15

ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--

ಅಪೋಸ್ತಲರ ಕೃತ್ಯಗಳು 21:20

ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

ರೋಮಾಪುರದವರಿಗೆ 15:18

ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

ಪ್ರಕಟನೆ 11:15

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

Interlinear

Choose Theme