ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
Cross references
ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.