Home Bibles ಮತ್ತಾಯ 13:5 · ಕನ್ನಡ ಬೈಬಲ್
ಮತ್ತಾಯ 13:5 · ಕನ್ನಡ ಬೈಬಲ್

ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;

Cross references

ಯೆಹೆಜ್ಕೇಲ 11:19

ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.

ಯೆಹೆಜ್ಕೇಲ 36:26

ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.

ಆಮೋಸ 6:12

ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.

ಜೆಕರ್ಯ 7:12

ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.

ಮತ್ತಾಯ 13:20

ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;

Interlinear

Choose Theme