ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
Cross references
ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.