ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
Cross references
ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.