Home Bibles ☰ Books ಮತ್ತಾಯ 15:2 · ಕನ್ನಡ ಬೈಬಲ್
ಮತ್ತಾಯ 15:2 · ಕನ್ನಡ ಬೈಬಲ್

ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.

Cross references

ಆದಿಕಾಂಡ 1:14

ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;

ಎಸ್ತೇರ್ 3:3

ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು.

ಮಾರ್ಕ 7:2

ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

ಮಾರ್ಕ 7:5

ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.

ಲೂಕ 11:38

ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.

ಕೊಲೊಸ್ಸೆಯವರಿಗೆ 2:8

ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.

ಕೊಲೊಸ್ಸೆಯವರಿಗೆ 2:20

ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ

1 ಪೇತ್ರ 1:18

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

Interlinear

Choose Theme