Home Bibles ಮತ್ತಾಯ 16:24 · ಕನ್ನಡ ಬೈಬಲ್
ಮತ್ತಾಯ 16:24 · ಕನ್ನಡ ಬೈಬಲ್

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

Cross references

ಮತ್ತಾಯ 10:38

ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.

ಮತ್ತಾಯ 27:32

ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

ಮಾರ್ಕ 8:34

ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.

ಮಾರ್ಕ 10:21

ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ

ಮಾರ್ಕ 15:21

ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.

ಲೂಕ 9:23

ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;

ಲೂಕ 14:27

ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

ಲೂಕ 23:26

ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.

ಯೋಹಾನ 19:17

ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.

ಅಪೋಸ್ತಲರ ಕೃತ್ಯಗಳು 14:22

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಕೊಲೊಸ್ಸೆಯವರಿಗೆ 1:24

ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.

1 ತೆಸಲೋನಿಕದವರಿಗೆ 3:3

ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.

2 ತಿಮೋಥೆಯ 3:12

ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.

ಹೆಬ್ರಿಯರಿಗೆ 11:24

ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.

1 ಪೇತ್ರ 4:1

ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.

Interlinear

Choose Theme