Home Bibles ☰ Books ಮತ್ತಾಯ 17:7 · ಕನ್ನಡ ಬೈಬಲ್
ಮತ್ತಾಯ 17:7 · ಕನ್ನಡ ಬೈಬಲ್

ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.

Cross references

ದಾನಿಯೇಲ 8:18

ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.

ದಾನಿಯೇಲ 9:21

ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.

ದಾನಿಯೇಲ 10:10

ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.

ದಾನಿಯೇಲ 10:18

ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ

ಮತ್ತಾಯ 14:27

ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.

ಲೂಕ 24:5

ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?

ಅಪೋಸ್ತಲರ ಕೃತ್ಯಗಳು 9:6

ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

ಪ್ರಕಟನೆ 1:17

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

Interlinear

Choose Theme