ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
Cross references
ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ