ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
Cross references
ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.