ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
Cross references
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.