Home Bibles ಮತ್ತಾಯ 19:5 · ಕನ್ನಡ ಬೈಬಲ್
ಮತ್ತಾಯ 19:5 · ಕನ್ನಡ ಬೈಬಲ್

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?

Cross references

ಆದಿಕಾಂಡ 2:21

ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.

ಆದಿಕಾಂಡ 34:3

ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.

ದ್ವಿತೀಯೋಪದೇಶಕಾಂಡ 4:4

ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.

ದ್ವಿತೀಯೋಪದೇಶಕಾಂಡ 10:20

ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.

ದ್ವಿತೀಯೋಪದೇಶಕಾಂಡ 11:22

ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ

1 ಸಮುವೇಲ 18:1

ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.

1 ಸಮುವೇಲ 25:43

ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್‌ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.

2 ಸಮುವೇಲ 1:26

ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.

1 ಅರಸುಗಳು 11:2

ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.

ಕೀರ್ತನೆಗಳು 45:10

ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.

ಕೀರ್ತನೆಗಳು 63:8

ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.

ಮಾರ್ಕ 10:5

ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.

ರೋಮಾಪುರದವರಿಗೆ 12:9

ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.

1 ಕೊರಿಂಥದವರಿಗೆ 6:16

ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.

1 ಕೊರಿಂಥದವರಿಗೆ 7:2

ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.

1 ಕೊರಿಂಥದವರಿಗೆ 7:4

ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.

ಎಫೆಸದವರಿಗೆ 5:31

ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.

Interlinear

Choose Theme