ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
Cross references
ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
ಎಡೆಬಿಡದೆ ಪ್ರಾರ್ಥನೆ ಮಾಡಿರಿ.