ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
Cross references
ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.