Home Bibles ಮತ್ತಾಯ 21:37 · ಕನ್ನಡ ಬೈಬಲ್
ಮತ್ತಾಯ 21:37 · ಕನ್ನಡ ಬೈಬಲ್

ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

Cross references

ಯೆಶಾಯ 5:4

ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

ಯೆರೆಮಿಯ 36:3

ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.

ಸೆಫನ್ಯ 3:7

ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.

ಮತ್ತಾಯ 3:17

ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

ಮಾರ್ಕ 12:6

ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.

ಲೂಕ 20:13

ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.

ಯೋಹಾನ 1:18

ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.

ಯೋಹಾನ 1:34

ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.

ಯೋಹಾನ 3:16

ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.

ಯೋಹಾನ 3:35

ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.

ಹೆಬ್ರಿಯರಿಗೆ 1:1

ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು

Interlinear

Choose Theme