ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.