Home Bibles ಮತ್ತಾಯ 21:6 · ಕನ್ನಡ ಬೈಬಲ್
ಮತ್ತಾಯ 21:6 · ಕನ್ನಡ ಬೈಬಲ್

ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

Cross references

ಆದಿಕಾಂಡ 6:22

ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

ಆದಿಕಾಂಡ 12:4

ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.

ನಿರ್ಗಮಕಾಂಡ 39:43

ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.

ನಿರ್ಗಮಕಾಂಡ 40:16

ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

1 ಸಮುವೇಲ 15:11

ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.

ಯೆಹೆಜ್ಕೇಲ 12:7

ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.

ಯೋಹಾನ 15:14

ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.

Interlinear

Choose Theme