Home Bibles ಮತ್ತಾಯ 22:39 · ಕನ್ನಡ ಬೈಬಲ್
ಮತ್ತಾಯ 22:39 · ಕನ್ನಡ ಬೈಬಲ್

ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.

Cross references

ಲೇವ್ಯಕಾಂಡ 19:18

ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.

ಮತ್ತಾಯ 19:19

ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.

ಮಾರ್ಕ 12:31

ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.

ಲೂಕ 10:27

ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.

ರೋಮಾಪುರದವರಿಗೆ 13:9

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ರೋಮಾಪುರದವರಿಗೆ 15:2

ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.

ಗಲಾತ್ಯದವರಿಗೆ 5:14

ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.

ಗಲಾತ್ಯದವರಿಗೆ 6:10

ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.

ಯಾಕೋಬ 2:8

ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.

Interlinear

Choose Theme