ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
Cross references
ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.