ಮತ್ತಾಯ 23:17 · ಕನ್ನಡ ಬೈಬಲ್
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
Cross references
ನಿರ್ಗಮಕಾಂಡ 30:26
ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
ಅಂಕೆಗಳ ಪುಸ್ತಕ 16:38
ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
ಕೀರ್ತನೆಗಳು 94:8
ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
ಮತ್ತಾಯ 23:19
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?