ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
Cross references
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.