ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
Cross references
ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.