Home Bibles ಮತ್ತಾಯ 25:45 · ಕನ್ನಡ ಬೈಬಲ್
ಮತ್ತಾಯ 25:45 · ಕನ್ನಡ ಬೈಬಲ್

ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

Cross references

ಆದಿಕಾಂಡ 12:3

ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.

ಅಂಕೆಗಳ ಪುಸ್ತಕ 24:9

ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.

ಕೀರ್ತನೆಗಳು 105:15

ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.

ಸಾಮೇತಿಗಳು 14:31

ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.

ಸಾಮೇತಿಗಳು 17:5

ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.

ಸಾಮೇತಿಗಳು 21:13

ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.

ಜೆಕರ್ಯ 2:8

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

ಮತ್ತಾಯ 25:40

ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

ಯೋಹಾನ 15:18

ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

ಅಪೋಸ್ತಲರ ಕೃತ್ಯಗಳು 9:5

ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.

1 ಯೋಹಾನ 3:12

ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

1 ಯೋಹಾನ 5:1

ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.

Interlinear

Choose Theme