ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
Cross references
ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.