Home Bibles ಮತ್ತಾಯ 26:30 · ಕನ್ನಡ ಬೈಬಲ್
ಮತ್ತಾಯ 26:30 · ಕನ್ನಡ ಬೈಬಲ್

ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.

Cross references

ಕೀರ್ತನೆಗಳು 81:1

ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.

ಮತ್ತಾಯ 21:1

ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--

ಮಾರ್ಕ 14:26

ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.

ಲೂಕ 21:37

ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.

ಲೂಕ 22:39

ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.

ಯೋಹಾನ 14:31

ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.

ಯೋಹಾನ 18:1

ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.

ಎಫೆಸದವರಿಗೆ 5:19

ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.

ಕೊಲೊಸ್ಸೆಯವರಿಗೆ 3:16

ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

Interlinear

Choose Theme