ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
Cross references
ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.
ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.
ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).