ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು.
ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು.
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.