Home Bibles ಮತ್ತಾಯ 27:1 · ಕನ್ನಡ ಬೈಬಲ್
ಮತ್ತಾಯ 27:1 · ಕನ್ನಡ ಬೈಬಲ್

ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

Cross references

ನ್ಯಾಯಾಧಿಪತಿಗಳು 16:2

ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.

1 ಸಮುವೇಲ 19:11

ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ

ಕೀರ್ತನೆಗಳು 2:2

ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

ಸಾಮೇತಿಗಳು 4:16

ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.

ಮೀಕ 2:1

ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.

ಮತ್ತಾಯ 23:13

ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಮತ್ತಾಯ 26:3

ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು

ಮಾರ್ಕ 15:1

ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

ಲೂಕ 22:66

ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--

ಲೂಕ 23:1

ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.

ಯೋಹಾನ 18:28

ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

ಅಪೋಸ್ತಲರ ಕೃತ್ಯಗಳು 4:24

ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;

ಅಪೋಸ್ತಲರ ಕೃತ್ಯಗಳು 5:21

ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು

Interlinear

Choose Theme