ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
Cross references
ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.