ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
Cross references
ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.