Home Bibles ಮತ್ತಾಯ 5:23 · ಕನ್ನಡ ಬೈಬಲ್
ಮತ್ತಾಯ 5:23 · ಕನ್ನಡ ಬೈಬಲ್

ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ

Cross references

ಆದಿಕಾಂಡ 41:9

ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

ಆದಿಕಾಂಡ 42:21

ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ಆದಿಕಾಂಡ 50:15

ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು

ಲೇವ್ಯಕಾಂಡ 6:2

ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ

ಲೇವ್ಯಕಾಂಡ 6:5

ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.

ದ್ವಿತೀಯೋಪದೇಶಕಾಂಡ 16:16

ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.

1 ಸಮುವೇಲ 15:22

ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.

1 ಅರಸುಗಳು 2:44

ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.

ಯೆಶಾಯ 1:10

ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.

ವಿಲಾಪಗಳು 3:20

ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.

ಯೆಹೆಜ್ಕೇಲ 16:63

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಹೊಶೇಯ 6:6

ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.

ಆಮೋಸ 5:21

ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.

ಮತ್ತಾಯ 5:24

ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.

ಮತ್ತಾಯ 8:4

ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.

ಮತ್ತಾಯ 23:19

ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?

ಮಾರ್ಕ 11:25

ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.

ಲೂಕ 19:8

ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.

Interlinear

Choose Theme