Home Bibles ಮತ್ತಾಯ 5:35 · ಕನ್ನಡ ಬೈಬಲ್
ಮತ್ತಾಯ 5:35 · ಕನ್ನಡ ಬೈಬಲ್

ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.

Cross references

2 ದಿನವೃತ್ತಾಂತ 6:6

ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.

ಕೀರ್ತನೆಗಳು 48:2

ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.

ಕೀರ್ತನೆಗಳು 87:2

ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.

ಕೀರ್ತನೆಗಳು 99:5

ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.

ಮಲಾಕಿ 1:14

ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಪ್ರಕಟನೆ 21:2

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.

ಪ್ರಕಟನೆ 21:10

ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.

Interlinear

Choose Theme